ಅಧ್ಯಕ್ಷರಾಗಿ ನಿವೃತ್ತ ಸಬ್‌ಇನ್‌ಸ್ಪೆಕ್ಟರ್ ಡಿ.ಲಕ್ಷ್ಮಣ್ ಆಯ್ಕೆ

IMG-20250811-WA0116
Published on

ಅರಸೀಕೆರೆ ಗ್ರಾಮಾಂತರ: ತಾಲೂಕು ಅಂಬಿಗರ ಚೌಡಯ್ಯ ಮತ್ತು ಗಂಗಾಮತಸ್ಥರ ಸಂಘದ ತಾಲೂಕು ಅಧ್ಯಕ್ಷರಾಗಿ ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಡಿ.ಲಕ್ಷ್ಮಣ್ ಆಯ್ಕೆಯಾದರು.

ನಗರದ ಶ್ರೀ ಗಂಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಸಮಾಜದ ಹಿರಿಯ ಮುಖಂಡರಾದ ಕೇಶವಮೂರ್ತಿ, ವಿಜಯ್, ಜಾಜೂರು ಸಿದ್ದೇಶ್ ಸಮ್ಮುಖದಲ್ಲಿ ಅಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಲಾಯಿತು. ನಂತರ ನಿವೃತ್ತ ಪೊಲೀಸ್ ಅಧಿಕಾರಿ ಡಿ.ಲಕ್ಷ್ಮಣ್ ಅವರನ್ನು ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಜಾವಗಲ್ ರವಿಕುಮಾರ್, ಸತೀಶ್ ಕಣಕಟ್ಟೆ, ಕಾರ್ಯದರ್ಶಿಯಾಗಿ ಬೆಲ್ಲದ ಪುಟ್ಟಸ್ವಾಮಿ, ಖಜಾಂಚಿಯಾಗಿ ಜಾಜೂರು ಸಿದ್ದೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್, 13 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷ ಡಿ.ಲಕ್ಷ್ಮಣ್ ಮಾತನಾಡಿ, ತಾಲೂಕಿನಲ್ಲಿ ಗಂಗಾಮತಸ್ಥರ ಸಮಾಜದ ಸಂಘಟನೆ ಮಾಡಿ ಸಮಾಜ ಬಾಂಧವರನ್ನು ಒಗ್ಗೂಡಿಸಿ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಗೆ ಶ್ರಮಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net