ಅಧ್ಯಕ್ಷರಾಗಿ ರಜಿನಿ, ಉಪಾಧ್ಯಕ್ಷರಾಗಿ ಶ್ರೀಧರ್ ಅವಿರೋಧ ಆಯ್ಕೆ

SRP _11-02 jpg
Published on

ಶ್ರೀರಂಗಪಟ್ಟಣ: ತಾಲೂಕಿನ ದರಸಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರಜಿನಿ ವಿಶ್ವನಾಥ್, ಉಪಾಧ್ಯಕ್ಷರಾಗಿ ಶ್ರೀಧರ್ ಅವಿರೋಧ ಆಯ್ಕೆಯಾದರು. ಇವರೊಂದಿಗೆ 6 ಜನ ಸದಸ್ಯರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಬೆಂಬಲಿಸಿದರು.


ದರಸಗುಪ್ಪೆ ಗ್ರಾಮ ಪಂಚಾಯಿತಿಯ ಒಟ್ಟು 14 ಜನ ಸದಸ್ಯರ ಪೈಕಿ 8 ಕಾಂಗ್ರೆಸ್ ಬೆಂಬಲಿತ, 6 ಜೆಡಿಎಸ್ ಬೆಂಬಲಿತ ಸದಸ್ಯರಿದ್ದಾರೆ. ಶುಕ್ರವಾರ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೂ ಇಬ್ಬರ ಹೊರತು ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾದರು.
ಜೆಡಿಎಸ್ ಬೆಂಬಲಿತ ಸದಸ್ಯರಾದ ಸರಿತಾ, ಕುಮಾರ್, ಮಾಲತಿ, ಶಿವಕುಮಾರ್, ದಾಕ್ಷಾಯಿಣಿ, ಮಮತಾ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಬೆಂಬಲಿಸುವುದಾಗಿ ತಿಳಿಸಿದರು.


ಚುನಾವಣಾಧಿಕಾರಿಯಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕಾರ್ಯನಿರ್ವಹಿಸಿದರು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಪ್ರಾಣೇಶ್, ಕಾಂಗ್ರೆಸ್ ಮುಖಂಡರಾದ ಗುರುಪ್ರಸಾದ್, ರವೀಂದ್ರ, ನಾರಾಯಣಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net