ಅಧ್ಯಯನ ಜತೆ ಧ್ಯಾನಕ್ಕೂ ಕೊಡಿ ಸಮಯ

28blk1
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಗುರುವಾರ ಆಯೋಜಿಸಿದ್ದ ಗುರುಕುಲ ಸೌರಭ ಕಾರ್ಯಕ್ರಮದಲ್ಲಿ ಅರುಣಾಚಲ ಪ್ರದೇಶ ಗೃಹ ಇಲಾಖೆ ಕಾನೂನು ಸಲಹೆಗಾರ ಅಭಿಷೇಕ ತಳವಾಡೆ ಅವರನ್ನು ಸನ್ಮಾನಿಸಲಾಯಿತು. ಶ್ರೀ ಗುರುಬಸವ ಪಟ್ಟದ್ದೇವರು, ಪ್ರಾಚಾರ್ಯ ಬಸವರಾಜ ಮೊಳಕೀರೆ ಇತರರಿದ್ದರು.
Published on

ಭಾಲ್ಕಿ: ವಿದ್ಯಾರ್ಥಿಗಳು ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ ತಮ್ಮದೇ ಆದ ನಿರ್ದಿಷ್ಟ ಯೋಜನೆ ರೂಪಿಸಿಕೊಂಡು ಅಧ್ಯಯನ ಜತೆಗೆ ಒಂದಿಷ್ಟು ಸಮಯ ಧ್ಯಾನಕ್ಕೆ ಮೀಸಲಿಡಬೇಕು ಎಂದು ಅರುಣಾಚಲ ಪ್ರದೇಶ ಗೃಹ ಇಲಾಖೆ ಕಾನೂನು ಸಲಹೆಗಾರ ಅಭಿಷೇಕ ಅಮರನಾಥ ತಳವಾಡೆ ಕಿವಿಮಾತು ಹೇಳಿದರು.

ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಗುರುಕುಲ ಸೌರಭ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಶಿಸ್ತು, ಸಮಯಪ್ರಜ್ಞೆ, ಶ್ರದ್ಧೆಯಿಂದ ಪಠ್ಯದಲ್ಲಿನ ವಿಷಯ ಓದುವುದರ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ಶೈಕ್ಷಣಿಕ ಜೀವನದ ಆನಂದ ಸವಿಯಬೇಕು ಎಂದು ಹೇಳಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಸಾನ್ನಿಧ್ಯ ವಹಿಸಿದ್ದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿದರು. ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕ ಮಾತನಾಡಿದರು. ಆಡಳಿತಾಧಿಕಾರಿ ಮೋಹನ ರೆಡ್ಡಿ, ಶಿವಲಿಂಗ ಮೂಲಗೆ, ಪೃಥ್ವಿರಾಜ ಬೆಲ್ಲಾಳೆ ಇದ್ದರು. ಶಿವಮಹಿಮಾ, ಭಾಗ್ಯಶ್ರೀ ವಚನ ಪ್ರಾರ್ಥನೆ ಗೀತೆ ನಡೆಸಿಕೊಟ್ಟರು. ಮಧುಕರ ಗಾಂವಕರ್ ನಿರೂಪಣೆ ಮಾಡಿದರು. ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ವಂದಿಸಿದರು.

ದೈನಂದಿನ ಚಟುವಟಿಕೆಗಳ ಜತೆ ವಿಶ್ವದಲ್ಲಿನ ಆಗು-ಹೋಗುಗಳ ಬಗ್ಗೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ.

| ಅಭಿಷೇಕ ತಳವಾಡೆ ಕಾನೂನು ಸಲಹೆಗಾರ, ಗೃಹ ಇಲಾಖೆ ಅರುಣಾಚಲ ಪ್ರದೇಶ

ಗ್ರಾಮೀಣ ಭಾಗದ ಪ್ರತಿಭೆಗಳಿಗಾಗಿ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಶ್ರೀ ಚನ್ನಬಸವೇಶ್ವರ ಗುರುಕುಲ ಸ್ಥಾಪಿಸಿ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ರಾಷ್ಟç ಮಟ್ಟಕ್ಕೆ ಪರಿಚಯಿಸಲು ಪ್ರಯತ್ನಿಸುತ್ತಿದ್ದಾರೆ. ಹಳ್ಳಿ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುರುಕುಲ ಶಿಕ್ಷಣ ನೀಡುತ್ತಿದೆ.

| ಶ್ರೀ ಗುರುಬಸವ ಪಟ್ಟದ್ದೇವರು ಹಿರೇಮಠ ಸಂಸ್ಥಾನದ ಪೀಠಾಧಿಪತಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net