ಅನಗತ್ಯ ಸಂಚಾರ, ವಾಹನ ತಪಾಸಣೆ

14
Published on

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಸಂಚರಿಸುತ್ತಿರುವ ಪೊಲೀಸರು, ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ನಗರಕ್ಕೆ ಹೊರಗಿನಿಂದ ಜನರು ಅನಗತ್ಯವಾಗಿ ಪ್ರವೇಶಿಸದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಕೊಲ್ಲಾಪುರ ವೃತ್ತ, ಗೋವಾವೇಸ್, ಬೋಗಾರ್‌ವೇಸ್ ಸೇರಿ ಎಲ್ಲ ಪ್ರಮುಖ ರಸ್ತೆಗಳಲ್ಲಿ ಇನ್ನಷ್ಟು ಬ್ಯಾರಿಕೇಡ್ ಅಳವಡಿಸಲಾಗಿದೆ. ಆಂಬುಲೆನ್ಸ್, ತುರ್ತು ಸೇವೆ ಹೊರತುಪಡಿಸಿ ಉಳಿದ ವಾಹನ ಮಾಲೀಕರನ್ನು ವಿಚಾರಣೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net