ಅನವಶ್ಯಕ ಸಂಚರಿಸುವ ವಾಹನಗಳ ವಿರುದ್ಧ ಕ್ರಮ

13 GAJENDRAGAD 1
Published on

ಗಜೇಂದ್ರಗಡ : ಅನವಶ್ಯಕವಾಗಿ ಸಂಚರಿಸುವ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ಪಟ್ಟಣದ ಬಸ್ ನಿಲ್ದಾಣ, ಕಾಲಕಾಲೇಶ್ವರ ವೃತ್ತ, ಎಪಿಎಂಸಿ ರಸ್ತೆ ಹಾಗೂ ರೋಣ ರಸ್ತೆಗಳಲ್ಲಿ ಪೊಲೀಸರು ಕೈಗೊಂಡಿರುವ ಬಂದೋಬಸ್ತ್ ಹಾಗೂ ಕರೊನಾ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು.

ಲಾಕ್​ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ದಿನನಿತ್ಯದ ಜೀವನಕ್ಕೆ ತೊಂದರೆಯಾಗದಂತೆ ಜಿಲ್ಲಾಡಳಿತ ಜನಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಸೂಚಿಸಿರುವ ಕಾನೂನು ಕ್ರಮಗಳ ಜಾರಿಗೆ ಜೊತೆಗೆ ಕರೊನಾ ಹರಡದಂತೆ ಸಾಕಷ್ಟು ಮುಂಜಾಗ್ರತೆ ಕ್ರಮ ಜಿಲ್ಲಾಡಳಿತ ಕೈಗೊಂಡಿದೆ. ಹೀಗಾಗಿ ತರಕಾರಿ, ದಿನಸಿ ಸೇರಿ ಅಗತ್ಯ ವಸ್ತುಗಳ ಖರೀದಿಗೆ ನೀಡಿರುವ ಸಮಯಾವಕಾಶದಲ್ಲಿ ಮಾತ್ರ ಮನೆಯಿಂದ ಒಬ್ಬರು ಹೊರಬಂದು ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಇನ್ನುಳಿದ ಸಮಯದಲ್ಲಿ ಕಡ್ಡಾಯವಾಗಿ ಸಾರ್ವಜನಿಕರು ಮನೆಯಲ್ಲಿರುವ ಮೂಲಕ ಅಧಿಕಾರಿಗಳೊಂದಿಗೆ ಸಹಕರಿಸಬೇಕು. ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ರೋಣ ತಹಸೀಲ್ದಾರ್ ಜೆ.ಬಿ. ಜಕ್ಕನಗೌಡ್ರ, ಉಪ ತಹಸೀಲ್ದಾರ್ ವೀರಣ್ಣ ಅಡಗತ್ತಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ, ಪಿಎಸ್​ಐ ಗುರುಶಾಂತ ದಾಶ್ಯಾಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net