ಅನಾಥ ಮಕ್ಕಳೊಂದಿಗೆ ಸಿಇಒ ಜನ್ಮ‌‌ ದಿನಾಚರಣೆ

IMG-20201124-WA0003
Published on

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ ಟಿ.ಭೂಬಾಲನ್ ತಮ್ಮ ಜನುಮ‌ ದಿನವನ್ನು

ನವನಗರದ ಸರ್ಕಾರಿ ಬಾಲಕರ ಬಾಲಮಂದಿರದ ಅನಾಥ ಮಕ್ಕಳೊಂದಿಗೆ ಸರಳವಾಗಿ ಮಂಗಳವಾರ ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಉನ್ನತ ಹುದ್ದೆ ಅಲಂಕರಿಸಿ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು ಎಂದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಸಿ.ಶಿವಲಿಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಎನ್.ಪಾಟೀಲ, ಅಧೀಕ್ಷಕಿ ಜಯಮಾಲಾ ದೊಡಮನಿ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net