ಅನಾರೋಗ್ಯಕ್ಕೆ ಬೇಸತ್ತು ಉದ್ಯಮಿ ಆತ್ಮಹತ್ಯೆ

suicide
suicide
Published on

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿ, ವಿವಿ ಮೊಹಲ್ಲಾ ನಿವಾಸಿ ಅರ್ಜುನ್(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಎಸ್.ಎಸ್.ಇಂಡಸ್ಟ್ರೀಸ್ ಕಾರ್ಖಾನೆ ಆವರಣದಲ್ಲಿ ಈ ಘಟನೆ ಸಂಭವಿಸಿದೆ.

ಮಹಾಜನ ವಿದ್ಯಾಸಂಸ್ಥೆಯ ಸಂಸ್ಥಾಪಕ ವಾಸುದೇವ ಮೂರ್ತಿ ಅವರ ಮೊಮ್ಮಗ ಆಗಿರುವ ಅರ್ಜುನ್ ಕೈಗಾರಿಕೆ ನಡೆಸುತ್ತಿದ್ದರು. ಮಂಗಳವಾರ ಬೆಳಗ್ಗೆ ಅರ್ಜುನ್ ಮನೆಯಲ್ಲಿ ಕಾಣದೆ ಇದ್ದಾಗ ಕುಟುಂಬದವರು ಮೊಬೈಲ್ ಫೋನ್ ಮೂಲಕ ಸಂಪರ್ಕಿಸಿದಾಗಲೂ ಲಭ್ಯವಾಗಲಿಲ್ಲ.

ಎಲ್ಲೆಡೆ ಹುಡುಕಿದರೂ ಸುಳಿವು ಸಿಗಲಿಲ್ಲ. ಹೀಗಾಗಿ ಮನೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಅರ್ಜುನ್ ಮನೆಯಿಂದ ಹೊರಗೆ ಹೋಗಿರುವುದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ಕಾರ್ಖಾನೆಗೆ ತೆರಳಿದ್ದು, ಅಲ್ಲಿದ್ದ ಶೆಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಕುಟುಂಬದವರು ತಿಳಿಸಿದ್ದಾರೆ.

ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳು ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net