ಅನಾರೋಗ್ಯದಿಂದ ಕೈದಿ ಸಾವು

crime
Published on

ಮೈಸೂರು: ನಗರದ ಕೇಂದ್ರ ಕಾರಾಗೃಹದ ಕೈದಿ ಸುರೇಶ್(60) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.


ಮೃತ ಸುರೇಶ್ 2022ರ ನವೆಂಬರ್‌ನಲ್ಲಿ ವ್ಯಕ್ತಿಯೊಬ್ಬರಿಗೆ 18.10 ಲಕ್ಷ ರೂ.ಮೌಲ್ಯದ ಚೆಕ್ ನೀಡಿದ್ದರು. ಆದರೆ ಖಾತೆಯಲ್ಲಿ ಹಣ ಇಲ್ಲದ ಕಾರಣ ಬೌನ್ಸ್ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಸುರೇಶ್‌ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇವರಿಗೆ ಹೃದಯದ ಸಮಸ್ಯೆ ಇದ್ದ ಕಾರಣ ವಿಶೇಷ ಅನುಮತಿ ಪಡೆದು ನಗರದ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net