ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ನಿಧನ

IMG-20230831-WA0031
Published on

ಕೆ.ಎಂ. ದೊಡ್ಡಿ: ರಜೆಯ ನಿಮಿತ್ತ ಒಂದು ವಾರದ ಹಿಂದೆ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧ ಕಿಡ್ನಿ ವೈಫಲ್ಯದಿಂದ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ನಿಧನರಾದರು.


ಸಮೀಪದ ಮೆಣಸಗೆರೆ ಗ್ರಾಮದ ಯೋಧ ಪ್ರಸನ್ನಕುಮಾರ್(42) ಮೃತರು. ಇವರು ಆ.28 ರಂದು ತೀವ್ರ ಎದೆನೋವಿನಿಂದ ಬಳಲುತ್ತಿದ್ದರಿಂದ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜತೆಗೆ, ಕಿಡ್ನಿ ವೈಫಲ್ಯವೂ ಇದ್ದ ಕಾರಣ ಬುಧವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.


ಯೋಧ ಪ್ರಸನ್ನಕುಮಾರ್‌ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಗುರುವಾರ ಸ್ವಗ್ರಾಮದ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಎಸ್‌ಪಿ ಯತೀಂದ್ರ, ತಾಲೂಕು ದಂಡಾಧಿಕಾರಿ ಟಿ.ಎನ್.ನರಸಿಂಹಮೂರ್ತಿ, ಡಿವೈಎಸ್‌ಪಿ ನವೀನ್, ಸರ್ಕಲ್‌ಇನ್ಸ್‌ಪೆಕ್ಟರ್ ಆನಂದ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.


ಸಂತಾಪ: ಬಿಎಸ್‌ಎಫ್ ಯೋಧ ಪ್ರಸನ್ನಕುಮಾರ್ ನಿಧನಕ್ಕೆ ಶಾಸಕ ಕದಲೂರು ಉದಯ್, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಜಿ.ಪಂ.ಮಾಜಿ ಸದಸ್ಯ ಎ.ಎಸ್.ರಾಜೀವ್ ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net