

ಭಾಲ್ಕಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಲೂಕಿನ ಮೇಥಿ ಮೇಳಕುಂದಾ ಗ್ರಾಮದ ಯೋಧ ಸುಧಾಕರ ದತ್ತಾತ್ರಿರಾವ್ ಮೋರೆ (59) ನಿಧನ ಹೊಂದಿದರು. ಬೆಂಗಳೂರಿನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.
ಮೋರೆ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ನಂತರ ಚಿತ್ರದುರ್ಗದ ರಕ್ಷಣಾ ಸಂಶೋಧನಾ ಅಭಿವೃದ್ಧಿ ಇಲಾಖೆಯ ಆಂತರಿಕ ಸುರಕ್ಷಾ ವಿಭಾಗದಲ್ಲಿ ಹಿರಿಯ ಶ್ರೇಣಿ ತಂಡದ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ. ಬುಧವಾರ ಬೆಳಗ್ಗೆ 10ಕ್ಕೆ ಸ್ವ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.