

ಕಾಗವಾಡ: ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದರು.
ಗ್ರಾಮ ಆಡಳಿತಾಧಿಕಾರಿಗಳ ಜಿಲ್ಲಾ ಸಂಘದ ಪದಾಧಿಕಾರಿ ಕೆ.ಕೆ. ಕುಲಕರ್ಣಿ ಮಾತನಾಡಿ, ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿ ಎರಡು ತಿಂಗಳು ಕಳೆದರೂ ಈವರೆಗೆ ಈಡೇರಿಲ್ಲ. ಹೀಗಾಗಿ ಮತ್ತೆ ಕಚೇರಿ ಕಾರ್ಯ ಸ್ಥಗಿತಗೊಳಿಸಿ ಮುಷ್ಕರ ಪ್ರಾರಂಭಿಸಿದ್ದೇವೆ ಎಂದರು.
ತಾಲೂಕು ಸಂಘದ ಅಧ್ಯಕ್ಷ ಪ್ರಕಾಶ ಪುಠಾಣಿ, ಸುಭಾಷ ಬಶೆಟ್ಟಿ, ಶೌಕತಅಲಿ ನಾಲತವಾಡ, ಪರಾಗ ಕಾಂಬಳೆ ಸೇರಿ ಎಲ್ಲ ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಗಳು ಇದ್ದರು.