ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕದತ್ತ ನಮ್ಮ ಹೆಜ್ಜೆ

CTD 22 NEWS--02
Published on

ಚಿತ್ರದುರ್ಗ: ಅನೀಮಿಯಾ(ರಕ್ತಹೀನತೆ)ಯಶಸ್ವಿ ನಿಯಂತ್ರಣಕ್ಕೆ ಸೂಕ್ತ ಜಾಗೃತಿ, ಪರೀಕ್ಷೆ ಹಾಗೂ ಚಿಕಿತ್ಸೆ ಬಹುಮುಖ್ಯವೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ಆರೋಗ್ಯ ಇಲಾಖೆಯಿಂದ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಕಬ್ಬಿಣ ಕೊರತೆ ರಕ್ತಹೀನತೆಗೆ ಸಾಮಾನ್ಯ ಕಾರಣವಾಗಿದೆ ಎಂದರು.
ರಕ್ತಹೀನತೆ ತಡೆಗೆ ತಾಲೂಕಿನಲ್ಲಿ ಮೊದಲ ಹಂತದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಪೋಷಕಾಂಶ ಮಾತ್ರೆಗಳನ್ನು ಅವರಿಗೆ ಕೊಡಲಾಗುವುದು ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ರಕ್ತಹೀನತೆಯಿಂದ ಬಳಲುತ್ತಿರುವ ಹದಿಹರೆಯದ ವರ ಆರೋಗ್ಯ ಸುಧಾರಣೆಗೆ ಇಲಾಖೆ ಪೂರಕ ಚಿಕಿತ್ಸಾ ಕ್ರಮಗಳನ್ನು ರೂಪಿಸಿದೆ. ಜಿಲ್ಲೆ ಪಿಯು ವಿದ್ಯಾರ್ಥಿಗಳಲ್ಲಿರುವ ಹಿಮೋಗ್ಲೋಬಿನ್ ವಿವರ ಸಂಗ್ರಹಿಸಲಾಗುವುದು ಎಂದರು.
ರಾಷ್ಟ್ರೀಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ತಂಡದ ವೈದ್ಯಾಧಿಕಾರಿಗಳಾದ ಡಾ.ವಾಣಿ, ಡಾ.ಮಂಜುಳಾ , ಶುಶ್ರೂಷಕಿ ಅಕ್ಷತಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಆಶಾ ಕಾರ್ಯಕರ್ತೆಯರು ಇದ್ದರು. 200 ವಿದ್ಯಾರ್ಥಿಗಳಿಗೆ ಹಿಮೋಗ್ಲೋಬಿನ್ ಪ್ರಮಾಣ ತಪಾಸಣೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net