ಅನುಚಿತ ವರ್ತನೆಗೆ ಖಂಡನೆ

Goverdhan Rathod
Published on

ಬೀದರ್: ಅಧಿವೇಶನದ ಚರ್ಚೆ ವೇಳೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಬಿಜೆಪಿ ಶಾಸಕರು ಕಾಗದಗಳನ್ನು ಹರಿದು ಹಾಕಿ ಅನುಚಿತವಾಗಿ ವರ್ತಿಸಿರುವುದು ಖಂಡನೀಯ ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಗೋವರ್ಧನ್ ರಾಠೋಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯು ಅತ್ಯಂತ ಪವಿತ್ರವಾಗಿದ್ದು, ಸಾಂವಿಧಾನಿಕ ಹುದ್ದೆಯಲ್ಲಿದ್ದವರ ಜತೆ ಬಿಜೆಪಿ ಶಾಸಕರು ಅಶಿಸ್ತಿನಿಂದ ವರ್ತಿಸಿದ್ದಾರೆ. ಕೂಡಲೇ ಬಿಜೆಪಿ ಶಾಸಕರು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net