ಅನುದಾನ ಬಿಡುಗಡೆಗೆ ಒತ್ತಾಯಿಸಿ ಮನವಿ

CTD MP BADARA---
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ 5300 ಕೋಟಿ ರೂ.ಬಿಡುಗಡೆಗೆ ಒತ್ತಾಯಿಸಿ ರಾಜ್ಯದ ಬಿಜೆಪಿ ಸಂಸದರ ನಿಯೋಗ ಹೊಸದಿಲ್ಲಿಯಲ್ಲಿ ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ನಿಯೋಗದಲ್ಲಿ ಸಂಸದರಾದ ಗೋವಿಂದ ಎಂ. ಕಾರಜೋ ಳ, ಡಾ. ಸುಧಾಕರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಗದ್ದಿಗೌಡರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net