ಅನುಭವ ಮಂಟಪ ತಿಂಗಳ ಕಾರ್ಯಕ್ರಮ

Anubhav Mantap Programme Invitation Card
Published on

ಬೀದರ್: ಇಲ್ಲಿಯ ಡಾ. ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ಆಗಸ್ಟ್ 11 ರಂದು ಸಂಜೆ 6.30 ಅನುಭವ ಮಂಟಪ ತಿಂಗಳ ಕಾರ್ಯಕ್ರಮ ನಡೆಯಲಿದೆ.
ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ, ಮಹಾಲಿಂಗ ಸ್ವಾಮೀಜಿ ನೇತೃತ್ವ ವಹಿಸುವರು. ಲಿಂಗಾಯತ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಜಿ. ಶೆಟಕಾರ್ ಉದ್ಘಾಟಿಸುವರು. ಪ್ರಸಾದ ನಿಲಯದ ಕಾರ್ಯದರ್ಶಿ ಪ್ರೊ. ಎಸ್.ಬಿ. ಬಿರಾದಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಮುಖರಾದ ಅಶೋಕ ಪಾಟೀಲ, ಡಾ. ಜಗನ್ನಾಥ ಹೆಬ್ಬಾಳೆ, ವೀರಭದ್ರಪ್ಪ ಬುಯ್ಯಾ, ಸುವರ್ಣಾ ಚಿಮಕೋಡೆ ಪಾಲ್ಗೊಳ್ಳುವರು. ಗುಂಡಮ್ಮ ಕಲ್ಯಾಣರಾವ್ ಜಾಬಾ ದಾಸೋಹ ಸೇವೆ ನೆರವೇರಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net