ಅನುಭವ ಮಂಟಪ-ಬಸವಾದಿ ಶರಣರ ವೈಭವ

bkt-22-2
ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಸೋಮವಾರ ರಾತ್ರಿ ಹಮ್ಮಿಕೊಂಡಿದ್ದ ಅನುಭವನ ಮಂಟಪ-ಬಸವಾದಿ ಶರಣರ ವೈಭವನ ಕಾರ್ಯಕ್ರಮದ ಸಿದ್ದತೆ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದರು.
Published on

ಬಾಗಲಕೋಟೆ: ಬಸವ ಜಯಂತಿ ಅಂಗವಾಗಿ ಕೂಡಲ ಸಂಗಮದಲ್ಲಿ ಏ.೨೯ ಮತ್ತು ೩೦ ರಂದು ಎರಡು ದಿನಗಳ ಕಾಲ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಜಿಲ್ಲಾಽಕಾರಿ ಸಭಾಂಗಣದಲ್ಲಿ ಸೋಮವಾರ ರಾತ್ರಿ ಹಮ್ಮಿಕೊಂಡಿದ್ದ ಅನುಭವನ ಮಂಟಪ-ಬಸವಾದಿ ಶರಣರ ವೈಭವನ ಕಾರ್ಯಕ್ರಮದ ಸಿದ್ದತೆ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣನವರ ಬದುಕು, ಸಂದೇಶ ಹಾಗೂ ಚಿಂತನೆಗಳನ್ನು ವ್ಯಾಪಕವಾಗಿ ಪ್ರಸರಿಸುವ ನಿಟ್ಟಿನಲ್ಲಿ ಕೂಡಲ ಸಂಗಮದಲ್ಲಿ ಎರಡು ದಿನಗಳ ಕಾಲ ವಿಶಿಷ್ಟವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಿದ್ದತೆಗಳು ನಡೆಯುತ್ತಿದ್ದು, ಎಲ್ಲರೂ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.

ಕಾರ್ಯಕ್ರಮದ ಮೊದಲ ದಿನ ಏ. ೨೯ ರಂದು ಬೆಳಗ್ಗೆ ಎರಡು ಹಾಗೂ ಮಧ್ಯಾಹ್ನ ಎರಡು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಸ್ಥಳೀಯ ಕಲಾವಿದರಿಂದ ಸಂಗೀತ ಹಾಗೂ ನೃತ್ಯ ರೂಪಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ. ಸಂಜೆ ಶಿವರಾತ್ರಿ ನಾಟಕ ಸಹ ಪ್ರದರ್ಶನಗೊಳ್ಳಲಿದೆ. ಗೋಷ್ಠಿಗಳಲ್ಲಿ ಖ್ಯಾತ ಸಾಹಿತಿಗಳು, ಕವಿಗಳು ಹಾಗೂ ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಎರಡನೇ ದಿನ ಏ.೩೦ ರಂದು ಬೆಳಗ್ಗೆ ಸ್ಥಳೀಯ ಹಾಗೂ ವಿವಿಧ ಜಿಲ್ಲೆಗಳ ಕಲಾತಂಡ ಹಾಗೂ ಸ್ತಬ್ದಚಿತ್ರಗಳ ಅದ್ದೂರಿ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ ನಂತರ ಸಂಗೀತ, ನಾಟಕ ಹಾಗೂ ವೈವಿದ್ಯಮಯ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವರು ಸೂಚನೆ ನೀಡಿದರು. ಎರಡನೇ ದಿನದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ೧೫೦೦ಕ್ಕೂ ಹೆಚ್ಚು ಸಾಹಿತಿಗಳು, ವಿವಿಧ ಕಲಾವಿದರು ಪಾಲ್ಗೊಳ್ಳಲಿದ್ದು, ವಿಶಿಷ್ಟವಾಗಿ, ಅರ್ಥಪೂರ್ಣವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಪ್ರತಿಯೊಂದು ತಾಲೂಕಿನಿಂದ ಸಾರ್ವಜನಿಕರು ಆಗಮಿಸಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಆಗಮಿಸುವರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಸಹ ಮಾಡಲಾಗುತ್ತಿದೆ ಎಂದರು. ಕಾರ್ಯಕ್ರಮ ಯಶಸ್ವಿಗೆ ೧೧ ಸಮಿತಿಗಳನ್ನು ರಚಿಸಲಾಗಿದೆ ಎಂದರು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಸ್.ಚನ್ನೂರ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ಸಭೆಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಽಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಕೂಡಲ ಸಂಗಮ ಅಭಿವೃದ್ಧಿ ಪ್ರಾಽಕಾರದ ಆಯುಕ್ತ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ ಸೇರಿದಂತೆ ವಿವಿಧ ಸಮಿತಿಯ ಜಿಲ್ಲಾ ಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net