ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಣ:ಪ್ರಕರಣ ದಾಖಲು

ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಣ:ಪ್ರಕರಣ ದಾಖಲು
Published on

ಹಾಸನ: ಚುನಾವಣಾಧಿಕಾರಿ ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಣ ಮಾಡಿದ ಆರೋಪ ಹಿನ್ನೆಲೆ ಶ್ರೀನಿಧಿ ಪ್ರಿಂಟಿಂಗ್ ಪ್ರೆಸ್ ಮಾಲೀಕ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರ ಮೇಲೆ ಚುನಾವಣೆ ಅಧಿಕಾರಿಗಳು ದಾಳಿ ನಡಸಿ ಪ್ರಕರಣ ದಾಖಲಿಸಿದ್ದಾರೆ.
ನಗರದ ಪ್ರವಾಸಿ ಮಂದಿರಕ್ಕೆ ಅಗಮಿಸಿದ್ದ ಸಹಾಯಕ ಚುನಾವಣಾಧಿಕಾರಿ ರಕ್ಷಿತ್ ಎಂಬುವರು ದಿನಪತ್ರಿಕೆ ನೋಡುವಾಗ ಅದರೊರಳಗಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಮತ ಕೋರಿ ಹೊರಡಿಸಿದ್ದ ಕರಪತ್ರ ಕಣ್ಣಿಗೆ ಬಿತ್ತು. ಕೂಡಲೇ ಅದನ್ನು ಕರಪತ್ರವನ್ನು ಪರಿಶೀಲಿಸಿದಾಗ ಮುದ್ರಿಸಲು ಪೂರ್ವಾನುಮತಿ ಪಡೆದಿರಲಿಲ್ಲ ಎನ್ನಲಾಗಿದೆ.
ನಂತರ ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿರುವ ಶ್ರೀನಿಧಿ ಪ್ರಿಂಟರ್ಸ್ ಪ್ರಿಂಟಿಂಗ್ ಪ್ರೆಸ್ ಮೇಲೆ ದಾಳಿ ನಡೆಸಿದ ಫ್ಲೈಯಿಂಗ್ ಸ್ವ್ಯಾಡ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ, ಅನುಮತಿ ಪಡೆಯದ ಹಿನ್ನಲೆ ಮಾಲೀಕನ ಮೇಲೆ ಪ್ರಕರಣ ದಾಖಲಿಸಿ ಪ್ರೆಸ್‌ಗೆ ಬೀಗಮುದ್ರೆ ಹಾಕಿದ್ದಾರೆ.
ಪ್ರಿಂಟರ್ಸ್ ಮಾಲೀಕ ಬಾಲಾಜಿ ಹಾಗೂ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net