ಅನುಮಾನಾಸ್ಪದ ರೀತಿಯಲ್ಲಿ ಬಿಲ್ ಕಲೆಕ್ಟರ್ ಶವ ಪತ್ತೆ

Published on

ಚಾಮರಾಜನಗರ: ತಾಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಬಸವರಾಜು(38) ಗ್ರಾಮದ ಮನೆಯೊಂದರ ಮುಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುನೀಲ್ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net