ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮಹಿಳೆ ಬಂಧನ

30kglphoto-4, (revathi)
Published on

ಚಾಮರಾಜನಗರ : ಕೊಳ್ಳೇಗಾಲ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಂತರಜಿಲ್ಲೆಯ ಮಹಿಳೆಯನ್ನು ಪೊಲೀಸರು ಬಂಧಿಸಿ ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನಿವಾಸಿ ರೇವತಿ(33) ಬಂಧಿತ ಆರೋಪಿ. ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಕಾಣಿಸಿಕೊಂಡಿದ್ದರಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಈಕೆ ಹಿಂದೆ ಸರ ಕಳ್ಳತನ ಪ್ರಕರಣಗಳಲ್ಲಿ ಭಾಗಿ ಆಗಿರುವುದು ತಿಳಿದು ಬಂದಿದೆ.


ರೇವತಿ ಇಬ್ಬರು ಮಹಿಳೆಯರ ಬಳಿ 2 ಸರವನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಬಂಧಿತಳಿಂದ ಸುಮಾರು 65 ಗ್ರಾಂ. ತೂಕದ 2 ಸರವನ್ನು ವಶಪಡಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net