

ಮೂಡಲಗಿ: ಸತೀಶ ಶುಗರ್ಸ್ ಕಾರ್ಖಾನೆಯು ರೈತರಿಗೆ ನಿರಂತರ ಸ್ಪಂದಿಸುವ ಮೂಲಕ ಉತ್ತಮ ಬಾಂಧವ್ಯ ಇಟ್ಟುಕೊಂಡಿದೆ ಎಂದು ತಳಕಟ್ನಾಳದ ಪ್ರಗತಿಪರ ರೈತ ಆನಂದ ಕುಲಕರ್ಣಿ ಹೇಳಿದರು.
ತಾಲೂಕಿನ ಹುಣಶ್ಯಾಳ ಪಿಜಿಯ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ ಏರ್ಪಡಿಸಿದ್ದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಖಾನೆಯ ತಾಂತ್ರಿಕ ವಿಭಾಗದ ಮುಖ್ಯಸ್ಥ ವೀರು ತಳವಾರ ಮಾತನಾಡಿ, ರೈತರು ಮತ್ತು ಗಡಿ ಕಾಯುವ ಸೈನಿಕರ ಸೇವೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.
ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ಪಿ.ಡಿ.ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ನಾಗನೂರದ ಪ್ರಗತಿಪರ ರೈತ ಶಿವಪ್ಪ ಹೊಸಮನಿ ಪೂಜೆ ನೆರವೇರಿಸಿದರು. ಮದ್ಯಸಾರ ಟಕದ ಪ್ರಧಾನ ವ್ಯವಸ್ಥಾಪಕ ಮಹೇಶ ಜಿ.ಆರ್. ಮಾತನಾಡಿದರು. 2023&24ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ದ್ವೀತಿಯ ಪಿಯುಸಿ ಮತ್ತು ಪದವಿ ಪರೀೆಗಳಲ್ಲಿ ಹೆಚ್ಚಿನ ಅಂಕಗಳೊಂದಿಗೆ ತೇರ್ಗಡೆಯಾದ ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮಕ್ಕಳಿಗೆ ಪೋತ್ಸಾಹ ಧನದ ಚೆಕ್ ಮತ್ತು ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಪ್ರಧಾನ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ ಸಸಾಲಟ್ಟಿ, ಮಹೇಶ ಜಿ.ಆರ್., ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಅರುಣ ಚೌಗಲಾ, ಸುರೇಶ ಬೋಸಲೆ ಹಾಗೂ ಹಿರಿಯ ಅಧಿಕಾರಿಗಳು, ಕಾರ್ಮಿಕ ಸಿಬ್ಬಂದಿ ಉಪಸ್ಥಿತರಿದ್ದರು. ಮಾನವ ಸಂಪನ್ಮೂಲ ವಿಭಾಗದ ಉಪ ವ್ಯವಸ್ಥಾಪಕ ಸದಾಶಿವ ಮಾಲಗಾರ ನಿರೂಪಿಸಿದರು. ಆಡಳಿತ ವಿಭಾಗದ ವ್ಯವಸ್ಥಾಪಕ ಗಿರೀಶ ಸೋನವಾಲಕರ ವಂದಿಸಿದರು.