

ಚಿತ್ರದುರ್ಗ: ಸಂವಿಧಾನದ 75ನೇ ವಜ್ರ ಮಹೋತ್ಸವ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣದ ಅಂಗವಾಗಿ ಬುದ್ಧ, ಬಸವ, ಅಂಬೇಡ್ಕರ್ ಸಮಿತಿಯಿಂದ ಅಂಬೇಡ್ಕರ್ ವೃತ್ತದಲ್ಲಿ ಡಿ. 6ರಂದು ಮಧ್ಯಾಹ್ನ 12ಕ್ಕೆ ಅನ್ನಸಂತರ್ಪಣೆ, ಸಂಜೆ 6ಕ್ಕೆ ಜ್ಯೋತಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಡಾ.ಎಂ.ಸಿ.ನರಹರಿ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ, ಡಾ.ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ಸಂಸದ ಗೋವಿಂದ ಎಂ. ಕಾರಜೋಳ, ಮಾಜಿ ಸಚಿವ ಎಚ್.ಆಂಜನೇಯ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜು, ಸಾಹಿತಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸಿವಿಲ್ ಕಂಟ್ರಾಕ್ಟರ್ ರುದ್ರಮುನಿ, ಸುನೀಲ್ ಚಿನ್ನಪ್ಪಣ್ಣ, ವಸಂತ, ತಿಪ್ಪೇಸ್ವಾಮಿ ಜೆ.ಜೆ.ಹಟ್ಟಿ, ಜಗದೀಶ ಕವಾಡಿಗರಹಟ್ಟಿ ಇತರರಿದ್ದರು.