ಅನ್ಯಉದ್ದೇಶಗಳಿಗೆ ಪರಿಶಿಷ್ಟರ ಅನುದಾನ ಬಳಕೆಗೆ ಆಕ್ರೋಶ

CTD STRIKE-DSS----
Published on

ಚಿತ್ರದುರ್ಗ: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿರುವ ರಾಜ್ಯಸರ್ಕಾರದ ನಡೆ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿತು.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಏಳಿಗೆಗೆ ಬಳಸಬೇಕಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಖರ್ಚು ಮಾಡುವಂತಿಲ್ಲ. ಆದರೂ, ರಾಜ್ಯಸರ್ಕಾರ ಈ ಹಣವನ್ನು ಬೇರೆ, ಬೇರೆ ಕೆಲಸಗಳಿಗೆ ವಿನಿಯೋಗಿಸುತ್ತಾ ಈ ವರ್ಗದವರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.

ಗ್ಯಾರೆಂಟಿಗಳಿಗೆ ಖರ್ಚು ಮಾಡುತ್ತ ದಲಿತ ಸಮುದಾಯಗಳನ್ನು ಸಿಎಂ ಸಿದ್ದ ರಾಮಯ್ಯ ಕಡೆಗಣಿಸುತ್ತಿದ್ದಾರೆ. ಅನುದಾನ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ 38ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ತಹಸೀಲ್ದಾರ್ ನಾಗವೇಣಿ ಅವರಿಗೆ ಮನವಿ ಸಲ್ಲಿಸಿದರು.

ದಸಂಸ (ಪ್ರೊ.ಬಿ.ಕೃಷ್ಣಪ್ಪ)ಜಿಲ್ಲಾ ಸಂಚಾಲಕ ಕೊಂಡಾಪುರ ಪರಮೇಶ್ವರಪ್ಪ, ಹೊನ್ನೂರು ಮಾರಣ್ಣ, ಹಿರೇಹಳ್ಳಿ ರಾಜಣ್ಣ, ಆನಂದ, ದಡಗೂರು ಗಂಗಾಧರ, ಎಚ್. ಉಮೇಶ, ಎಸ್. ಆನಂದ ಗೌರಸಮುದ್ರ, ಎಸ್. ಮಹಾಂತೇಶ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net