ಅಪಘಾತ: ವ್ಯಕ್ತಿ ಸಾವು

ಅಪಘಾತ: ವ್ಯಕ್ತಿ ಸಾವು
Published on

ಅರಸೀಕೆರೆ: ಸ್ಕೂಟಿ ಹಾಗು ಬೈಕ್ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ತಾಲೂಕಿನ ಜಾವಗಲ್ ನಿವಾಸಿ ಅಬ್ದುಲ್ ವಾಹಿದ್ ಮೃತರು. ಗ್ರಾಮದಲ್ಲಿ ಟೈಲರಿಂಗ್ ಕೆಲಸ ಮಾಡಿಕೊಂಡಿದ್ದ ಅವರು ನ. 28 ರಂದು ಸ್ಕೂಟಿಯಲ್ಲಿ ದರ್ಗಾದಿಂದ ಬಸ್ ನಿಲ್ದಾಣ ಕಡೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಬಂದ ಬೈಕ್ ಸವಾರ ಡಿಕ್ಕಿ ಮಾಡಿದ್ದಾನೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಾವಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net