ಅಪಘಾತ,ಅಪಾಯದಿಂದ ಪಾರಾದ ಪ್ರಯಾಣಿಕರು

ctd 000.5
Published on

ಭರಮಸಾಗರ(ಚಿತ್ರದುರ್ಗ):ಭರಮಸಾಗರ ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ವಿಜಾಪುರ ಗೊಲ್ಲರಹಟ್ಟಿ ಬಳಿ ಮಂಗಳವಾರ ಬೆಳಗಿನ ಜಾವ 3ರ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು,ಅದೃಷ್ಟವಶಾತ್ ಯಾವುದೇ ಜೀವಾಪಾಯ ವಾಗಿಲ್ಲ. ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಮುಂದೆ ಹೋಗುತ್ತಿದ್ದ ಲಾರಿಗೆ ಹಾಗೂ ರೋ ಡ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಿದ್ದಿದೆ. ಬಸ್ಸಿನಲ್ಲಿದ್ದ 48 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು,ಒಬ್ಬರಿಗೆ ಗಾಯಗಳಾಗಿವೆ. ಬಸ್ಸಿನ ಮುಂಭಾಗ ಹಾಗೂ ಲಾರಿ ಹಿಂಬದಿ ಸಂಪೂರ್ಣ ಜಖಂ ಆಗಿದೆ. ಭರಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net