ಅಪಘಾತದಲ್ಲಿ ಅಂಬಾರಾಯ ಚಲಗೇರಿ ಸಾವು

ambaray chalgeri
Published on

ಕಲಬುರಗಿ: ನಗರದ ಹೊರವಲಯದ ಸಿರನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್​ ಅಪಘಾತದಲ್ಲಿ ಬಿಜೆಪಿ ಎಸ್ಸಿ ಮರ‍್ಚಾ ಜಿಲ್ಲಾ ಉಪಾಧ್ಯಕ್ಷ ಅಂಬಾರಾಯ ಚಲಗೇರಿ ಮೃತಪಟ್ಟಿದ್ದಾರೆ. ಗುರುವಾರ ಮಧ್ಯಾಹ್ನ ಬೈಕ್​ ಮೇಲೆ ಪ್ರಯಾಣಿಸುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಂಬಾರಾಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಚಾರ ಠಾಣೆ &೧ರಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net