ಅಪಘಾತದಲ್ಲಿ ಇಬ್ಬರು ಮೃತ

ACCIDENT
Published on

ಎಚ್.ಡಿ.ಕೋಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೊಪ್ಪನಹಳ್ಳಿ ಸಮೀಪ ನಡೆದಿದೆ.
ತಾಲೂಕಿನ ಚಿಕ್ಕೂರು ಗ್ರಾಮದ ಮಣಿ (17), ಅಭಿ (20) ಮೃತರು.
ಅಭಿ ಮತ್ತು ಮಣಿ ಹ್ಯಾಂಡ್ ಪೋಸ್ಟ್‌ಗೆ ಬಂದು ಕೆಲಸ ಮುಗಿಸಿ ಮಧ್ಯಾಹ್ನ ಚಿಕ್ಕೂರು ಗ್ರಾಮಕ್ಕೆ ವಾಪಸ್ ಬರುತ್ತಿದ್ದರು.
ಮೈಸೂರು ಕಡೆಯಿಂದ ಹ್ಯಾಂಡ್‌ಪೋಸ್ಟ್ ಗೆ ಬರುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರಿಗೂ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದರು.
ಸ್ಥಳಕ್ಕೆ ಎಚ್.ಡಿ.ಕೋಟೆ ಪೊಲೀಸರು ಭೇಟಿ ನೀಡಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಎಚ್.ಡಿ.ಕೋಟೆಗೆ ರವಾನಿಸಿದರು. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೂಡ್ಸ್ ವಾಹನ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net