ಅಪಘಾತದಲ್ಲಿ ಒಬ್ಬ ಸಾವು, ನಾಲ್ವರಿಗೆ ಗಾಯ

28Manju2
ಬೈಲಹೊಂಗಲ ತಾಲೂಕಿನ ಸಂಪಗಾಂವಿ ಹಳ್ಳದಲ್ಲಿ ಕಾರು ಪಲ್ಟಿ ಹೊಡೆದು ಬಿದ್ದಿದೆ.
Published on

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೈಲಹೊಂಗಲ ತಾಲೂಕಿನ ಸಂಪಗಾಂವ ಸಮೀಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮಹಾರಾಷ್ಟ್ರದ ಹೊಸೂರ ಗ್ರಾಮದ ಮನೋಹರ ಅಣ್ಣಪ್ಪ ಮಂಡಗಾವಿ (72) ಮೃತ ವ್ಯಕ್ತಿ. ಬೆಳಗಾವಿಯಿಂದ ಸಂಪಗಾಂವ ಗ್ರಾಮ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಕಾರಿನ ಟೈಯರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಸಂಪಗಾಂವ ಹಳ್ಳದಲ್ಲಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net