ಅಪಘಾತದಲ್ಲಿ ಗಾಯಗೊಂಡಿದ್ದ ಪಾದಚಾರಿ ಸಾವು

ramesh(55)
Published on

ಕೆ.ಆರ್.ಸಾಗರ : ಕೆ.ಆರ್.ಸಾಗರದ ಸಂತೆಮಾಳದ ಡಿವೈಡರ್ ದಾಟುತ್ತಿದ್ದ ವೇಳೆ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ್ತಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಪಟ್ಟಣದ ರೈಲ್ವೆ ನಿಲ್ದಾಣದ ಬಳಿಯ ನಿವಾಸಿ ರಮೇಶ್(55) ಮೃತರು. ಮಂಗಳವಾರ ಸಂಜೆ ಕೆ.ಆರ್.ಸಾಗರ ಸಂತೆದ ಮಾಳದ ಬಳಿ ಡಿವೈಡರ್ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net