ಅಪಘಾತದಲ್ಲಿ ಪೇದೆ ಸಾವು, ಕೊಲೆ ಶಂಕೆ

IMG-20230320-WA0031
Published on

ಕಲಬುರಗಿ : ಚಿತ್ತಾಪುರ ತಾಲೂಕಿನ ಹಲಕರ್ಟಿ-ಲಾಡ್ಲಾಪುರ ಮಧ್ಯದಲ್ಲಿ ಕಳೆದ ರಾತ್ರಿ ಸಂಭವಿಸಿದ ಅಪಘಾತದಲ್ಲಿ ವಾಡಿ ಪೊಲೀಸ್ ಠಾಣೆಯ ಮುಖ್ಯಪೇದೆ ಮೃತಪಟ್ಟಿದ್ದಾರೆ. ಘಟನೆ ಬೆಳಕಿಗೆ ಬಂದಾಗ ಕೊಲೆ ಎಂಬ ಶಂಕೆ ವ್ಯಕ್ತವಾಗಿತ್ತು.

ಬೈಕ್ ಮೇಲೆ ಹೋಗುತ್ತಿದ್ದ ವೇಳೆಗೆ ಅಪರಿಚಿತ ವಾಹನ ಡಿಕ್ಕಿ ಪರಾರಿಯಾಗಿದೆ.

ಕರಿಯಪ್ಪ ಪೂಜಾರಿ (35) ಮೃತಪಟ್ಟ ಪೊಲೀಸ್ ‌ಪೇದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತೆಗ್ಗಳ್ಳಿ ಮೂಲದವರು. ವಾಡಿಯ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಯಾದಗಿರಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ ನಾಲವಾರ ಚೆಕ್‌ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸಿದ್ದ ಪೇದೆ ಕರಿಯಪ್ಪ ರಾತ್ರಿ 8 ಗಂಟೆಗೆ ಕರ್ತವ್ಯ ಮುಗಿದ ನಂತರ ಅಪರಿಚಿತ ಕಾರಿನಲ್ಲಿ ವಾಡಿ ಪೊಲೀಸ್ ಕ್ವಾಟ್ರಸ್‌ನ ಮನೆಗೆ ತೆರಳಿದ್ದು, ಎಂದಿನಂತೆ ಊಟ ಮಾಡಿ ಮಲಗಿದ್ದರು ಎನ್ನಲಾಗಿದೆ.

ತಡರಾತ್ರಿ ಎದ್ದು ಪುನಃ ನಾಲವಾರ ಚೆಕ್ ಪೋಸ್ಟ್ ಕಡೆಗೆ ಬೈಕ್ ಸವಾರಿ ಹೋದವರು ಸೋಮವಾರ ಬೆಳಗ್ಗೆ ಲಾಡ್ಲಾಪುರ ಗ್ರಾಮ ಸಮೀಪದ ಡಿಗ್ಗಿ ತಾಂಡಾ ಪಕ್ಕದ ಕೂಡು ರಸ್ತೆ ಸಮೀಪ ಶವವಾಗಿ ಪತ್ತೆಯಾಗಿದೆ.
ಕೂಡಲೇ‌ ಪೊಲೀಸರು ಭೇಟಿ ನೀಡಿದರು.‌ಕುಟುಂಬದವರಿಗೆ ಮಾಹಿತಿ ನೀಡಿದರು. ಮನೆಯವರು ಆಗಮಿಸಿದ ನಂತರ ಸ್ಥಳ ಪಂಚನಾಮೆ ಮಾಡಲಾಯಿತು. ಅಪಘಾತ ಎಂಬುವುದು ಸ್ಪಷ್ಟವಾಗಿದೆ. ವಾಡಿ ಠಾಣೆಯಲ್ಕಿ ಕೆಸ್ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net