ಅಪಘಾತದಲ್ಲಿ ಬೈಕ್​ ಸವಾರ ಸಾವು

Published on

ಬುಕ್ಕಾಪಟ್ಟಣ: ಶಿರಾ ತಾಲೂಕು ಹೂಯಿಲ್​ದೊರೆ ಸಮೀಪದ ರಾಷ್ಟ್ರೀಯ ಹೆದ್ದಾರಿ&234ರ ಸೇತುವೆ ಬಳಿಯ ತಿರುವಿನಲ್ಲಿ ಕಾರು&ಬೈಕ್​ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್​ ಸವಾರ ಗಾಯಗೊಂಡಿದ್ದಾನೆ. ಬಡಕೆಗುಡ್ಲು ಗ್ರಾಮದ ಪುನೀತ್​ ಗಾಯಗೊಂಡವ. ಹೂಯಿಲ್​ದೊರೆಯಿಂದ ಶಿರಾ ಕಡೆಗೆ ಪ್ರಯಾಣಿಸುತ್ತಿದ್ದಾಗ ಶಿರಾ ಕಡೆಯಿಂದ ಬಂದ ಇಕೋ ವಾಹನ ಡಿಕ್ಕಿಹೊಡೆದಿದೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡ ಪುನೀತ್​ ಅವರನ್ನು ಚಿಕಿತ್ಸೆಗೆಂದು ಆಂಬುಲೆನ್ಸ್​ನಲ್ಲಿ ಶಿರಾ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸಾವು

ಪಾವಗಡ: ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ದೋಮ್ಮತಮರಿ ಸಮೀಪ ಶುಕ್ರವಾರ ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವೆಂಕಟಾಪುರ ಗ್ರಾಮದ ನಿವಾಸಿ ಖಾಸಿಂ(55) ಮೃತ. ಶುಕ್ರವಾರ ಬೆಳಗಿನ ಜಾವ 6 ಗಂಟೆಯಲ್ಲಿ ಬೈಕ್​ನಲ್ಲಿ ದೋಮ್ಮತಮರಿ ಗ್ರಾಮದ ಮೂಲಕ ಆಂಧ್ರದ ಪೆನುಕೊಂಡೆಕ್ಕೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪಾವಗಡ ಪೋಲಿಸರು ಘಟನಾ ಸ್ಥಳ ಪರಿಶೀಲಿಸಿ, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಪಾವಗಡ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net