

ನಾಗಮುನ್ನೋಳಿ: ಸಮೀಪದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ& ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಎರಡು ವಾಹನಗಳ ಮಧ್ಯೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟು, ನಾಲ್ವರಿಗೆ ಗಾಯವಾದ ಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ರಾಕೇಶ ವಾಟಕರ್ (23), ಸೌರಭ ಕುಲಕರ್ಣಿ (22) ಮೃತ ಯುವಕರು. ಎರಡೂ ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟನಾ ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಸಂಚಾರಿ ವಿಭಾಗದ ಪಿಎಸ್ಐ ರೂಪಾಲಿ ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.