ಅಪಘಾತದಲ್ಲಿ ಹಲವರಿಗೆ ಗಾಯ

Published on

ಹುಲಿಯೂರುದುರ್ಗ: ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ಬೊಮ್ಮನಹಳ್ಳಿ ಗೇಟ್​ ಬಳಿ ಗುರುವಾರ ಸಂಜೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ.

ಕೊರಟಗೆರೆ ತಾಲೂಕಿನ ಕೋಳಾಲದ ನಾಲ್ವರು ಇನ್ನೋವಾ ಕಾರಿನಲ್ಲಿ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಾಲಯ ಹೋಗಿ ಮರಳುತ್ತಿದ್ದಾಗ ಬೊಮ್ಮನಹಳ್ಳಿ ಗೇಟ್​ ಬಳಿ ಕುಣಿಗಲ್​ನಿಂದ ಬರುತ್ತಿದ್ದ ಶಿಫ್ಟ್​ ಕಾರಿಗೆ ಡಿಕ್ಕಿಯಾಗಿದೆ. ಸ್ಥಳಿಯರ ನೆರವಿನಿಂದ ಗಾಯಾಳುಗಳನ್ನು ಕುಣಿಗಲ್​ನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಜಕಂಗೊಂಡಿದೆ. ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net