ಅಪರಾಧ ತಡೆಗೆ ಕಾಲ್ನಡಿಗೆ ಗಸ್ತು

2423cf0f-cc61-40cd-939b-ee240ac30ca0
Published on

ಮೈಸೂರು: ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರ ಸ್ಥಳಗಳಲ್ಲಿ ಪೊಲೀಸರು ಕಾಲ್ನಡಿಗೆ ಗಸ್ತು ಮಾಡುವ ಮೂಲಕ ಸಾರ್ವಜನಿಕರ ಕುಂದುಕೊರತೆ ಆಲಿಸುತ್ತಿದ್ದಾರೆ.


ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವನೆ ಮೂಡಿಸುವ ಸಲುವಾಗಿ ಈ ಕ್ರಮ ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಬೆಳಗ್ಗೆ , ಸಂಜೆ ವೇಳೆಯಲ್ಲಿ ಆಯಾ ಠಾಣಾ ಸರಹದ್ದಿನ ಪಟ್ಟಣ ಮತ್ತು ಗ್ರಾಮಗಳ ಪ್ರಮುಖ ಬೀದಿಗಳು, ಶಾಲಾ-ಕಾಲೇಜುಗಳ ಆವರಣ, ಆಸ್ಪತ್ರೆ, ಬಸ್ ನಿಲ್ದಾಣಗಳ ಬಳಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ನಡೆಸಲಿದ್ದಾರೆ.

ಜತೆಗೆ, ಪೊಲೀಸ್ ಠಾಣಾ ಸರಹದ್ದಿನ ಗ್ರಾಮಗಳ ದಲಿತ ಕಾಲನಿಗಳಿಗೂ ಭೇಟಿ ನೀಡಿ ಕುಂದುಕೊರತೆ ಆಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net