ಅಪರಾಧ ತಡೆಗೆ ಜನರ ಸಹಕಾರ ಅಗತ್ಯ

1sor1
ಸೊರಬ ಪಟ್ಟಣದ ಚಿಕ್ಕಪೇಟೆಯಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಅಂಗವಾಗಿ ಪಿಎಸ್‌ಐ ಎಂ.ಎಚ್.ನವೀನ್‌ಕುಮಾರ್ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಡಿ.ಎಸ್.ಪ್ರಸನ್ನಕುಮಾರ್ ದೊಡ್ಮನೆ, ನಾಗೇಶ್, ರಾಘವೇಂದ್ರ ಇತರರಿದ್ದರು.
Published on

ಸೊರಬ: ಸಮುದಾಯ ಪೊಲೀಸ್ ವ್ಯವಸ್ಥೆ ಬಲಪಡಿಸುವ ದೃಷ್ಟಿಯಿಂದ ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಪಿಎಸ್‌ಐ ಎಂ.ಎಚ್.ನವೀನ್‌ಕುಮಾರ್ ಹೇಳಿದರು.

ಪಟ್ಟಣದ ಚಿಕ್ಕಪೇಟೆಯಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಬೀಟ್ ಸಿಬ್ಬಂದಿ ಜನರಲ್ಲಿ ಸುರಕ್ಷತೆ, ಸೈಬರ್ ಅಪರಾಧಗಳ ಅರಿವು ಮೂಡಿಸುತ್ತಿದ್ದಾರೆ. ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿ ಪೊಲೀಸ್ ಇಲಾಖೆಯ ಸಮಗ್ರ ಸೇವೆಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ ಎಂದರು.

ಪ್ರತಿ ತಿಂಗಳ ಎರಡನೇ ಶನಿವಾರದಂದು ಆಯಾ ಠಾಣಾ ವ್ಯಾಪ್ತಿಗಳಲ್ಲಿ ಈ ಯೋಜನೆಯಡಿ ಸಾರ್ವಜನಿಕ ಸಂಪರ್ಕ ಸಭೆಯನ್ನು ಬೀಟ್ ಪೊಲೀಸ್ ಅಕಾರಿಗಳು ನಡೆಸಲಿದ್ದಾರೆ. ಈ ಸಭೆಯಲ್ಲಿ ಪೊಲೀಸ್ ಮತ್ತು ಇನ್ನಿತರ ಇಲಾಖೆಗಳ ಸಮಸ್ಯೆಯನ್ನು ಚರ್ಚಿಸಬಹುದು ಎಂದರು.

ಮನೆ-ಮನೆಗೆ ಪೊಲೀಸ್ ಯೋಜನೆ ಸಾರ್ವಜನಿಕರು ಮತ್ತು ಪೊಲೀಸ್ ನಡುವೆ ಒಂದು ಸಂಪರ್ಕ ಸೇತುವೆ ಏರ್ಪಡಿಸಿ ಕುಂದುಕೊರತೆಗಳ ಶೀಘ್ರ ನಿವಾರಣೆಗೆ ವೇದಿಕೆಯಾಗಲಿದೆ. ಅಪರಾಧ ಕೃತ್ಯಗಳ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಮಹತ್ತರದ್ದಾಗಿದೆ ಎಂದು ತಿಳಿಸಿದರು.

ಪುರಸಭೆ ಸದಸ್ಯ ಡಿ.ಎಸ್. ಪ್ರಸನ್ನಕುಮಾರ್ ದೊಡ್ಮನೆ, ಹೆಡ್ ಕಾನ್ಸ್‌ಟೇಬಲ್ ನಾಗೇಶ್, ಸಿಬ್ಬಂದಿ ರಾಘವೇಂದ್ರ, ಲೋಕೇಶ್, ವಿನಯ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net