ಅಪರಾಧ ನಿಯಂತ್ರಣಕ್ಕೆ ಕ್ರಮ ವಹಿಸಿ ಗೃಹ ಸಚಿವರ ಸೂಚನೆ

14
Published on

ಮೈಸೂರು: ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಅಪರಾಧ ನಿಯಂತ್ರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಶನಿವಾರ ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಮೈಸೂರು ಸೇರಿದಂತೆ ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ನಡೆದ ಅಪರಾಧಗಳ ಮಾಹಿತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಅಪರಾಧ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಮಾಹಿತಿ ಪಡೆದುಕೊಂಡರು. ಕಾನೂನು ಸುವ್ಯವಸ್ಥೆ ಪಾಲನೆ ಮತ್ತು ಅಪರಾಧ ನಿಯಂತ್ರಣಕ್ಕೆ ಕ್ರಮ ವಹಿಸಲು ಸೂಚನೆಗಳನ್ನು ನೀಡಿದರು.
ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ, ಮೈಸೂರು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ನಾಲ್ಕು ಜಿಲ್ಲೆಗಳ ಎಸ್ಪಿಗಳು ಇದ್ದರು.
ನಗರ ವ್ಯಾಪ್ತಿಯಲ್ಲೂ ಸಭೆ: ಮೈಸೂರು ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ನಗರದಲ್ಲಿ ದಾಖಲಾಗಿರುವ ಅಪರಾಧ ಮತ್ತು ಅಪಘಾತಗಳ ಮಾಹಿತಿಯೊಂದಿಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಪೊಲೀಸ್ ಕಮಿಷನರ್ ಬಿ.ರಮೇಶ್, ಡಿಸಿಪಿಗಳಾದ ಎಂ.ಮುತ್ತುರಾಜು, ಜಾಹ್ನವಿ, ಎ.ಮಾರುತಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net