

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು
ಚಿಕ್ಕೋಡಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಕಮತನೂರ ಗೇಟ್ ಬಳಿ ಸಂಕೇಶ್ವರ- ಗೋಕಾಕ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ಬೆಲ್ಲದ ಬಾಗೇವಾಡಿ ಗ್ರಾಮದ ನಿವಾಸಿ ಸುನೀಲ ಮಾರುತಿ ರಾಜವ್ವಗೋಳ(೫೪) ಮೃತ ವ್ಯಕ್ತಿ. ಈತ ಹುಕ್ಕೇರಿಯಿಂದ ಸಂಕೇಶ್ವರ ಕಡೆಗೆ ಬೈಕ್ ಮೇಲೆ ಹೊರಟಿರುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರಿಂದ ಮೃತನಾಗಿದ್ದಾನೆ.
ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.