ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವು

25 skpp 2
Published on

ಸಕಲೇಶಪುರ: ತಾಲೂಕಿನ ರಾಟೆಮನೆ ಸಮೀಪದ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಜಿಂಕೆಯೊಂದು ಮೃತಪಟ್ಟಿದೆ.

ಗುರುವಾರ ಮುಂಜಾನೆ ಗುಂಪಿನೊಂದಿಗೆ ಹೆದ್ದಾರಿ ದಾಟುವಾಗ ಸುಮಾರು 10 ವರ್ಷ ಪ್ರಾಯದ ಗಂಡು ಜಿಂಕೆ ಮೃತಪಟ್ಟಿದೆ. ಕಳೆದ ಒಂದು ದಶಕದ ಅವಧಿಯಲ್ಲಿ ಈ ಪ್ರದೇಶದಲ್ಲಿ 20ಕ್ಕೂ ಅಧಿಕ ಜಿಂಕೆಗಳು ಮೃತಪಟ್ಟಿದ್ದು, ಅರಣ್ಯ ಇಲಾಖೆ ಎಚ್ಚರಿಕೆ ಫಲಕ ಆಳವಡಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net