ಅಪರಿಚಿತ ವಾಹನ ಡಿಕ್ಕಿಯಾಗಿ ಸಾವು

Published on

ಕೆ.ಎಂ.ದೊಡ್ಡಿ : ಭಾರತೀನಗರದ ಭಾರತೀ ಕಾಲೇಜು ಸಮೀಪ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾಡುಕೊತ್ತನಹಳ್ಳಿ ಗ್ರಾಮದ ರಮೇಶ್(48) ಮೃತರು. ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ಸ್ನೇಹಿತರೊಂದಿಗೆ ನಿಂತು ಮಾತನಾಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಕೂಡಲೇ ಗಾಯಗೊಂಡಿದ್ದ ರಮೇಶ್ ಅವರನ್ನು ಪಕ್ಕದಲ್ಲೇ ಇದ್ದ ಅಸ್ಟರ್ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಮೃತದೇಹವನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಂಚನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ನಡೆದ ಸ್ಥಳದಲ್ಲಿರುವ ಸಿ.ಸಿ ಕ್ಯಾಮರಾ ವಿಡಿಯೋ ಪರಿಶೀಲಿಸಿ ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ರಮೇಶ್ ಅಂತ್ಯಕ್ರಿಯೆ ಸ್ವಗ್ರಾಮ ಕಾಡುಕೊತ್ತನಹಳ್ಳಿಯಲ್ಲಿ ಗುರುವಾರ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net