ಅಪರಿಚಿತ ವಾಹನ ಹರಿದು ಪಾದಚಾರಿ ಸಾವು

12 mlv 1 _______(35)
Published on

ಮಳವಳ್ಳಿ: ತಾಲೂಕಿನ ಭುಗತಗಹಳ್ಳಿ ಗ್ರಾಮದ ಸಮೀಪ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ಶುಕ್ರವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿದ್ದಾರೆ.


ತಿ.ನರಸಿಪುರ ತಾಲೂಕಿನ ರಾಮೇಗೌಡನಪುರ ಗ್ರಾಮದ ಮಹೇಂದ್ರ(35) ಮೃತರು. ಇವರು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಿಂದ ಮಹೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾರಿಹೋಕರು ನೀಡಿದ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ, ಮೃತದೇಹವನ್ನು ಪಟ್ಟಣದ ಶವಾಗಾರಕ್ಕೆ ಸ್ಥಳಾಂತರಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net