

ಬುಕ್ಕಾಪಟ್ಟಣ: ಶಿರಾ ತಾಲೂಕಿನ ಬುಕ್ಕಾಪಟ್ಟಣದ ಇಂದಿರಾನಗರದ ಚಂದ್ರಶೇಖರ್ ಅವರ ಮನೆಯ ಬಳಿ ಮಂಗಳವಾರ ಬೆಳಗ್ಗೆ ಅಪರೂಪದ, ಅಳಿವಿನಂಚಿನಲ್ಲಿರುವ ಪುನುಗು ಬೆಕ್ಕು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣೆ ಮಾಡಿದ್ದಾರೆ. ನೋಡಲು ಕರಿ ಚಿರತೆಯಂತೆ ಕಾಣುತ್ತಿದ್ದ ಪುನುಗು ಬೆಕ್ಕನ್ನು ನೋಡಿದ ಗ್ರಾಮಸ್ಥರು ಭಯ ಗೊಂಡಿದ್ದರು. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಇಲಾಖೆ ನೌಕರ ಸುರೇಶ್ ಅವರು ಸ್ಥಳಕ್ಕೆ ಆಗಮಿಸಿ, ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯದಲ್ಲಿ ಬಿಟ್ಟಿದ್ದಾರೆ.