ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶ

10arsph2ep
ಕಲ್ಲನಾಯ್ಕನಹಳ್ಳಿ ಗ್ರಾಮದ ಸರಹದ್ದಿನಲ್ಲಿರುವ ಕುರುಚಲು ಕಾಡಿಗೆ ಭಾನುವಾರ ಬೆಂಕಿ ಬಿದ್ದಿದ್ದು ಆಗಸದಲ್ಲಿ ಹೊಗೆ ದಟ್ಟೈಸಿರುವುದು.
Published on

ಅರಸೀಕೆರೆ: ತಾಲೂಕಿನ ಕಲ್ಲನಾಯ್ಕನಹಳ್ಳಿ ಗ್ರಾಮದ ಸರಹದ್ದಿನಲ್ಲಿರುವ ಕುರುಚಲು ಕಾಡಿಗೆ ಭಾನುವಾರ ಬೆಂಕಿ ಬಿದ್ದಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.

ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕೆನ್ನಾಲಿಗೆಯಿಂದಾಗಿ ಆಗಸದಲ್ಲಿ ಭಾರಿ ಹೊಗೆ ಆವರಿಸಿದ್ದು, ಕ್ಷಣಕಾಲ ಆತಂಕ ಎದುರಾಗಿತ್ತು. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ತಂಡ ಹಲವು ತಾಸು ಕಾರ್ಯಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಸಫಲವಾಯಿತು. ಇದರಿಂದಾಗಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net