ಅಪೌಷ್ಠಿಕತ ನಿವಾರಣೆಗೆ ಮಕ್ಕಳಿಗೆ ನುಗ್ಗೆ ಎಲೆ ಪುಡಿ

01-08-Shiva-3
ರಾಯಚೂರಿನ ಜಿ.ಪಂ.ನ ಜಲನಿರ್ಮಲ ಸಭಾಂಗಣದಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ ಮಂಗಳವಾರ ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕಾಂಶ ಹೆಚ್ಚಿಸುವ ನುಗ್ಗೆ ಎಲೆ ಪುಡಿಯನ್ನು ವಿತರಿಸಿದರು. ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ, ಡಿಎಚ್‌ಒ ಡಾ.ಸುರೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚೇತನಕುಮಾರ ಇದ್ದರು.
Published on

ರಾಯಚೂರು: ಜಿಲ್ಲೆಯಲ್ಲಿ ಅಪೌಷ್ಠಿಕ ಮಕ್ಕಳಿಗೆ ಹೆಚ್ಚುವರಿ ಪೌಷ್ಠಿಕಾಂಶ ಒದಗಿಸುವ ನಿಟ್ಟಿನಲ್ಲಿ ಮಕ್ಕಳಿಗೆ ನುಗ್ಗೆ ಎಲೆ ಪುಡಿಯನ್ನು ನೀಡುವ ಮೂಲಕ ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
ಸ್ಥಳೀಯ ಜಿ.ಪಂ. ಜಲ ನಿರ್ಮಲ ಸಭಾಂಗಣದಲ್ಲಿ ಕೇಂದ್ರೀಯ ಉಗ್ರಾಣ ನಿಗಮದ ಸಿಎಸ್‌ಆರ್ ಅನುದಾನದಡಿ ಅಪೌಷ್ಠಿಕ ಮಕ್ಕಳಿಗೆ ಪೌಷ್ಠಾಕಾಂಶಯುಕ್ತ ನುಗ್ಗೆ ಎಲೆಪುಡಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.
ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿರುವ 6 ತಿಂಗಳಿಂದ 6 ವರ್ಷದ ತೀವ್ರ ಅಪೌಷ್ಠಿಕ ಮತ್ತು ಮಧ್ಯಮ ಅಪೌಷ್ಠಿಕತೆಯಿಂದ ಕೂಡಿದ 30 ಸಾವಿರ ಮಕ್ಕಳಿಗೆ ಪೌಷ್ಠಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ನುಗ್ಗೆ ಎಲೆ ಪುಡಿ ವಿತರಣೆ ಮಾಡಲಾಗುತ್ತಿದೆ. ತಾಯಂದಿರು ಮಕ್ಕಳಿಗೆ ಪುಡಿಯನ್ನು ಆಹಾರದೊಂದಿಗೆ ನೀಡಬೇಕು.
ಕೇಂದ್ರ ಉಗ್ರಾಣ ನಿಗಮದ ಸಿಎಸ್‌ಆರ್ ಅನುದಾನದಿ ಒಂದು ವರ್ಷದವರೆಗೆ ಪುಡಿಯನ್ನು ನೀಡಲು ಯೋಜನೆ ರೂಪಿಸಲಾಗಿದ್ದು, ಒಂದು ವರ್ಷದ ಅವಯಲ್ಲಿ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಳ ಕಾಣಬಹುದಾಗಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯದ ಜತೆಗೆ ಪೌಷ್ಠಿಕತೆ ಉತ್ತಮಗೊಳಿಸಲು ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಚಂದ್ರಶೇಖರ ನಾಯಕ ತಿಳಿಸಿದರು.
ಕೇಂದ್ರ ಉಗ್ರಾಣ ನಿಗಮದ ಹಿರಿಯ ಸಹಾಯಕ ವ್ಯವಸ್ಥಾಪಕ ಕುನಾಲ್ ಶ್ರೀಧರ ಮಾತನಾಡಿ, ಜಿಲ್ಲೆಯಲ್ಲಿ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ವಿಭಿನ್ನ ಯೋಜನೆಗಳನ್ನು ರೂಪಿಸಲಾಗುತತಿದ್ದು, ಅದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ, ಡಿಎಚ್‌ಒ ಡಾ.ಸುರೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚೇತನಕುಮಾರ, ನಂದಿ ಆರ್ಗನೆಕ್ ಾರ್ಮ್ಸನ ಬಸ್ಸಯ್ಯ ಹಿರೇಮಠ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net