ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವ್ಯಕ್ತಿಗೆ 20 ವರ್ಷ ಕಠಿಣ ಶಿಕ್ಷೆ

444
Published on

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಫೋಕ್ಸೋ ಕಾಯ್ದೆಯಡಿ ೨೦ ವರ್ಷ ಕಠಿಣ ಶಿಕ್ಷೆ ಮತ್ತು ೧೦ ಸಾವಿರ ರೂ ದಂಡವನ್ನು ವಿಧಿಸಲಾಗಿದೆ.

ಗೌರಿಬಿದನೂರು ತಾಲೂಕಿನ ಗೊಟಕನಾಪುರ ಅಹೇಶ್ ಅಪರಾಧಿ. ಕಳೆದ ೨೦೨೦ ನೇ ಸಾಲಿನ ಜುಲೈನಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಜತೆ ಕರೆದುಕೊಂಡು ಹೋಗಿ, ಜಮೀನಿನಲ್ಲಿ ಅತ್ಯಾಚಾರವೆಸಗಿದ್ದ. ಸಂತ್ರಸ್ಥೆ ಗರ್ಭಿಣಿಯಾಗಿದ್ದಳು. ಇದರ ಬಗ್ಗೆ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಲ್ಲಿನ ವೃತ್ತ ನಿರೀಕ್ಷಕ ಎಸ್?.ರವಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಧೀಶೆ ಎನ್.ಸವಿತಾ ಕುಮಾರಿ ೨೦ ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು ೧೦ ಸಾವಿರ ರೂ ದಂಡವನ್ನು ವಿಧಿಸಿದ್ದಾರೆ ಎಂದು ಬಾಲಕಿಯ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಲಕ್ಷಿö್ಮÃ ನರಸಿಂಹಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net