

ಶಿವಮೊಗ್ಗ: ನಗರದ ವಿವಿಧೆಡೆ ಬೈಕ್‌ಗಳನ್ನು ಕಳವು ಮಾಡಿದ್ದ ಅಪ್ರಾಪ್ತ ಸೇರಿ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದು 10 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. ಹೊಸಮನೆಯ ರಾಹುಲ್ ಅಲಿಯಾಸ್ ಬ್ರಹ್ಮಾಂಡ (21), ಕಾಮಾಕ್ಷಿ ಬೀದಿಯ ಹರ್ಷ (18) ಮತ್ತು ಅಪ್ರಾಪ್ತ ಬಂಧಿತರು. ಜೂ.10ರಂದು ನಂಜಪ್ಪ ಆಸ್ಪತ್ರೆ ಹಿಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಕಳವು ಮಾಡಲಾಗಿತ್ತು. ಈ ಬಗ್ಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು. ಸೋಮವಾರ ಮೂವರನ್ನು ಬಂಧಿಸಿದ್ದು ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ತಲಾ ಎರಡು ಸ್ಕೂಟಿ, ಟಿವಿಎಸ್ ಸೇರಿ 4.80 ಲಕ್ಷ ರೂ. ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.