ತಿಪಟೂರು: ಅಪ್ರಾಪ್ತ ಪುತ್ರನಿಗೆ ಬೈಕ್ ಚಲಾಯಿಸಲು ಕೊಟ್ಟ ಪಾಲಕರಿಗೆ ನಗರದ ಎಸ್ಸಿಜೆ ಜೆಎಂಎಫ್ಸಿ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಜು.1ರಂದು ನಗರಠಾಣೆಯ ಎಸ್ಐ ಕೃಷ್ಣಪ್ಪ ಅವರು ವಾಹನಗಳ ತಪಾಸಣೆ ಮಾಡುವ ಸಂದರ್ಭ ನಗರದ ಖಾಸಗಿ ಶಾಲೆಯ ವಿದ್ಯಾರ್ಥಿ ಬೈಕ್ ಚಲಾಯಿಸುತ್ತಿರುವುದನ್ನು ಗಮನಿಸಿ ಬೈಕ್ ಚಲಾಯಿಸಲು ಕೊಟ್ಟಿದ್ದ ವಿದ್ಯಾರ್ಥಿಯ ತಂದೆ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶನಿವಾರ ತೀರ್ಪು ಪ್ರಕಟಿಸಿದ ನ್ಯಾಯಾಲಯ,10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.