ಅಬಾಕಸ್ ತರಗತಿ, ಬೇಸಿಗೆ ಶಿಬಿರ ಮುಕ್ತಾಯ

28 ckm 2
ಚಿಕ್ಕಮಗಳೂರಿನ ರಾಮನಹಳ್ಳಿ ಬಡಾವಣೆಯ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದಲ್ಲಿ ಅಬಾಕಸ್ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶಿಲ್ಪಾ ರಮೇಶ್ ಉಪಸ್ಥಿತರಿದ್ದರು.
Published on

ಚಿಕ್ಕಮಗಳೂರು: ನಗರದ ರಾಮನಹಳ್ಳಿ ಬಡಾವಣೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೆÊ.ಲಿ. ವತಿಯಿಂದ ಏ.೧ ರಿಂದ ೪ರಿಂದ ೧೫ ವರ್ಷದ ಒಳಗಿನ ಮಕ್ಕಳಿಗೆ ಆಯೋಜಿಸಿದ್ದ ಬೇಸಿಗೆ ಶಿಬಿರ ಮುಕ್ತಾಯಗೊಂಡಿದೆ. ಮೇ ೫ರಿಂದ ಎರಡನೇ ಬ್ಯಾಚ್ ಪ್ರಾರಂಭವಾಗಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕಿ ಶಿಲ್ಪಾ ರಮೇಶ್ ತಿಳಿಸಿದ್ದಾರೆ.

ಈ ಬೇಸಿಗೆ ಶಿಬಿರದಲ್ಲಿ ಅಬಾಕಸ್೧೧-೧ ಪರೀಕ್ಷೆ ಜೊತೆಗೆ ಎಲ್ಲಾ ರೀತಿಯ ಸಾಂಸ್ಕೃತಿಕ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗಿದೆ. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಶನಿವಾರ ಮತ್ತು ಭಾನುವಾರ ನಿರಂತರವಾಗಿ ತರಗತಿಗಳು ನಡೆಯಲಿದ್ದು, ಅಬಾಕಸ್೧೧-೨ ತರಗತಿಗಳು ಮುಂದುವರೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net