ಅಭಿಮಾನಿಗಳಿಂದ ಅನ್ನಸಂತರ್ಪಣೆ

IMG-20241226-WA0011
Published on

ಚಾಮರಾಜನಗರ: ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾದ ಎಚ್.ಎಂ.ಗಣೇಶಪ್ರಸಾದ್ ಅವರ 40 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ  ಬಳಗದ ವತಿಯಿಂದ ನಗರದ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮ ನೇತೃತ್ವ ವಹಿಸಿದ್ದ ಮುಖಂಡ ಸ್ಟೈಲ್ ಮಂಜುನಾಥ್ ಮಾತನಾಡಿ, ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಹೆಚ್.ಎಂ.ಗಣೇಶಪ್ರಸಾದ್ ಅವರ ಹುಟ್ಟು ಹಬ್ಬದ ಅಂಗವಾಗಿ  ಅಭಿಮಾನಿ ಬಳಗದ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಅಯೋಜಿಸಲಾಗಿದೆ. ಅವರಿಗೆ ಶ್ರೀಚಾಮರಾಜೇಶ್ವರಸ್ವಾಮಿ ಆಯೋಗ್ಯ, ಆಯಸ್ಸು ಕರುಣಿಸಲಿ, ರಾಜಕಾರಣದಲ್ಲಿ ಉನ್ನತ ಸ್ಥಾನಮಾನ ಸಿಗಲಿ, ಜಿಲ್ಲೆಯ ಅಭಿವೃದ್ಧಿಗೆ ಹೆಚ್ವು ಒತ್ತು ನೀಡುವಂತಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಚೂಡಾಧ್ಯಕ್ಷ  ಸೈಯದ್ ರಫೀ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸೈಯದ್ ಮುಸಾಹಿಬ್, ಜಿಲ್ಲಹಿರೇಬೇಗೂರು ಗುರುಸ್ವಾಮಿ, ದೇವರಾಜು, ಈಶ್ವರ್ ರಕ್ಷಿತ್, ಶಶಾಂಕ್, ಸೂರ್ಯ, ಪ್ರಮೋದ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net