

ಚಿತ್ರದುರ್ಗ: ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣಕ್ಕಾಗಿ ಜಿಲ್ಲಾಡಳಿತ ಹಾಗೂ ನಗರಸಭೆಯಿಂದ ಜು. 28 ರವರೆಗೆ ಅಭಿಯಾನ ಹಮ್ಮಿಕೊಂಡಿದ್ದು, ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಜಾಗೃತಿ ಮೂಡಿಸಲಾಯಿತು. ಪರಿಸರ ಕಾರ್ಯಕರ್ತ ಎಚ್.ಎಸ್.ಕೆ.ಸ್ವಾಮಿ, ನಗರಸಭೆ ಪರಿಸರ ಇಂಜಿನಿಯರ್ ಜಾಫರ್, ಆರೋಗ್ಯ ನಿರೀಕ್ಷಕರಾದ ಸರಳಾ, ಭಾರತಿ, ಸಹಾಯಕಿ ತಬಸ್ಸುಮ್‌ಬಾನು, ಪೌರ ಕಾರ್ಮಿಕರು, ನೂರಾರು ವಿದ್ಯಾರ್ಥಿಗಳು ಇದ್ದರು.