ಅಭಿಯಾನಕ್ಕೆ ಶಾಸಕ ರಾಮದಾಸ್ ಚಾಲನೆ

25
Published on

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಾಲಿಕೆಯ ವಾರ್ಡ್ ಸಂಖ್ಯೆ 6ರಲ್ಲಿ 8 ಮನೆಗಳಿಗೆ ಪಕ್ಷದ ಧ್ವಜ ಕಟ್ಟುವ ಮೂಲಕ ಬೂತ್ ವಿಜಯ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ವರ್ಗಗಳ ಜನತೆಯ ಅಭ್ಯುದಯಕ್ಕೆ ಜಾರಿಗೆ ತಂದಿರುವ ವಿವಿಧ ಜನಪರ ಯೋಜನೆಗಳನ್ನು ಮನೆ-ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು. ಸುಮಾರು 40,000 ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸುವ ಸಂಕಲ್ಪ ಮಾಡಲಾಗಿದೆ. ಜತೆಗೆ ಪ್ರಧಾನಿ ಮೋದಿ ಅವರು ನಡೆಸಿಕೊಡುವ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ ಎಂದು ತಿಳಿಸಿದರು.

ಕೆ.ಆರ್. ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಂ.ವಡಿವೇಲು, ಪಾಲಿಕೆ ಸದಸ್ಯರಾದ ಬಿ.ವಿ.ಮಂಜುನಾಥ್, ಶಾಂತಮ್ಮ ವಡಿವೇಲು, ವಿದ್ಯಾ ಅರಸ್, ಶಿವಪ್ರಸಾದ್, ಮುರುಳಿ, ಉಮಾ, ನಾಗರತ್ನ, ಮಹದೇವ್, ಚಂದ್ರಶೇಖರ್, ಮೀನಾಕ್ಷಿ, ನಂಜುಂಡ, ನಂಜುಂಡಯ್ಯ, ಮಹದೇವ್, ರುದ್ರೇಶ್, ಸುಮಲತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net