ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ

1SHP1 (1) copy
Published on

ಯಾದಗಿರಿ: ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾ ನ್ಯಾಯಾಲಯದ ಸಂಕಿರಣದ ಕಟ್ಟಡ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಆದರೆ ಕಟ್ಟಡ ಸುತ್ತಲು ಕಂಪೌಂಡ ನಿರ್ಮಾಣ ಹಾಗೂ ಸಿಬ್ಬಂದಿಗಳ ವಸತಿಗೃಹ ಸೇರಿದಂತೆ ಇನ್ನೂ $22 ಕೋಟಿ ಅನುದಾನದ ಅಗತ್ಯವಿದೆ. ಆದರೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಎದುರಾಗಿದೆ ಎಂದು ಜಿಲ್ಲಾ ಸೇಷನ್ಸ್ ನ್ಯಾಯಾಧೀಶ ಬಿ.ಜಯಂತಕುಮಾರ ತಿಳಿಸಿದರು.

ನಗರದ ವಕೀಲರ ಸಂಘಕ್ಕೆ ಶುಕ್ರವಾರ ಆಗಮಿಸಿದಾಗ ಸಂಘದ ವತಿಯಿಂದ ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜಿಲ್ಲೆಯ ಗುರುಮಿಠಕಲ್, ವಡಗೇರಾ, ಹುಣಸಗಿ ತಾಲ್ಲೂಕಿನಲ್ಲಿ ಹೊಸದಾಗಿ ನ್ಯಾಯಾಲಯ ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಕಟ್ಟಡಕ್ಕೆ 10 ಎಕರೆ ಜಮೀನು ಬೇಕಾಗುತ್ತದೆ. ತ್ವರಿತವಾಗಿ ಮೂರು ತಾಲ್ಲೂಕುಕುಗಳಲ್ಲಿ ನ್ಯಾಯಾಲಯ ಸ್ಥಾಪಿಸಲು ಯತ್ನಿಸಲಾಗುವುದು. ಯಾದಗಿರಿ ಜಿಲ್ಲೆಯಾಗಿ 13 ವರ್ಷ ಸಂದಿವೆ. ಇನ್ನೂ ಅಗತ್ಯವಾದ ಅಭಿವೃದ್ದಿ ಕಾಮಗಾರಿಗಳು ಕಾಣುತ್ತಿಲ್ಲ. ಬೇರೆ ಜಿಲ್ಲೆಗೆ ಹೋಲಿಸಿದರೆ ಇಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಹೆಚ್ಚಿದೆ. ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಪ್ರಾಮಾಣಿಕವಾಗಿ ಯತ್ನಿಸೋಣ ಎಂದರು.

ಜಿಲ್ಲಾ ನ್ಯಾಯಾಲಯದಲ್ಲಿ ಹೆಚ್ಚಿನ ಪ್ರಮಾಣದ ಸಿವಿಲ್ ಪ್ರಕರಣಗಳು ಪೆಂಡಿಂಗ್ಸ್ ಇವೆ. ಸಾಧ್ಯವಾದಷ್ಟು ತ್ವರಿತ ವಿಲೇವಾರಿಗೆ ಯತ್ನಿಸಲಾಗುತ್ತಿದೆ. ಸೆ.9ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲು ವಕೀಲರು ಪ್ರಾಮಾಣಿಕವಾಗಿ ಯತ್ನಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net